ನ್ಯೂಸ್ ನಾಟೌಟ್: ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಸ್ಥಾನ ಅಲಂಕರಿಸಲಿದ್ದಾರೆ ಎಂದು ಎಂಬಿ ಪಾಟೀಲ್ ಹೇಳಿಕೆಯಿಂದ ಹಲವು ಕಾಂಗ್ರೆಸ್ ಮುಖಂಡರಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಇದರಿಂದ ಅಧಿಕಾರದ ಹಂಚಿಕೆ ಬಗ್ಗೆ ಅನೇಕ ಪ್ರಶ್ನೆಗಳು ಎದ್ದವು. ಈ ವಿಚಾರವನ್ನು ತಣಿಸಲು ಕಡೆಗೆ ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಸ್ಪಷ್ಟೀಕರಣ ನೀಡಿದರೂ ಪ್ರಯೋಜನವಾಗಿಲ್ಲ.
ಹೇಳಿಕೆ ಇನ್ನೊಂದು ತಿರುವು ಪಡೆಯುವ ಲಕ್ಷಣ ಕಾಣುತ್ತಿದ್ದಂತೆ ಕಮಾಂಡ್ ಮಧ್ಯ ಪ್ರದೇಶ ಮಾಡಿದೆ. ಇದೀಗ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲಾ ರಾಜ್ಯ ಕಾಂಗ್ರೆಸ್ ನಾಯಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಣದ ಶಾಸಕ-ಸಚಿವರಿಗೆ ಸೂಚನೆ ನೀಡಿದ್ದು “ಯಾರೂ ಕೂಡ ಅನಗತ್ಯ ಹೇಳಿಕೆ ನೀಡಬಾರದು. ಸಿಎಂ ಡಿಸಿಎಂ ನಡುವಿನ ಮಾತುಕತೆಗಳು ನಾಲ್ಕು ಗೋಡೆಯ ಮಧ್ಯೆ ನಡೆದಿರುವುದು. ಯಾರೂ ಕೂಡ ಗೊಂದಲ ಮೂಡಿಸುವ ಹೇಳಿಕೆ ನೀಡಬೇಡಿ. ಗೊಂದಲ ಮೂಡಿಸುವ ಹೇಳಿಕೆ ನೀಡಿದರೆ ಎಐಸಿಸಿ ಗಮನಿಸುತ್ತದೆ. ಯಾವುದೇ ತೀರ್ಮಾನಗಳಿದ್ದರೂ ಎಐಸಿಸಿ ನಾಯಕರೇ ತೀರ್ಮಾನಿಸುತ್ತಾರೆ” ಎಂದು ರಾಜ್ಯ ಕಾಂಗ್ರೆಸ್ಸಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.