ನ್ಯೂಸ್ ನಾಟೌಟ್ :ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ವಯಸ್ಸಿನ ಕಾರಣ ಪಕ್ಷದವರೇ ಅಪಸ್ವರ ಎತ್ತಿದ್ದರಿಂದ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ ನಲ್ಲಿದ್ದು ಕೊಂಡು ಕೆಲಸ ಮಾಡಲಿದ್ದೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ನಿರ್ಧಾರಕ್ಕು ಬದ್ಧನಾಗಿದ್ದೆ.ಗೆಲುವಿನ ವಿಶ್ವಾಸವಿತ್ತು.ಆದರೂ ಸೋಲಾಗಿದೆ ಎಂದು ತಿಳಿಸಿದ್ದಾರೆ.ಪಕ್ಷಕ್ಕೆ ಹಿನ್ನಡೆಯಾಗಿದೆ ನಿಜ. ಆದರೆ ಇದರಿಂದ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದರು.