ನ್ಯೂಸ್ ನಾಟೌಟ್ : ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ರವರನ್ನು ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಸೇವಾ ಹಿರಿತನ ಸಮಗ್ರತೆ ಮತ್ತು ಭ್ರಷ್ಟಾಚಾರದ ಪ್ರಕರಣಗಳ ತನಿಖೆಯ ಅನುಭವದ ಆಧಾರದ ಮೇಲೆ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಗೃಹ ಖಾತೆಯು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಗೆ ನೀಡುತ್ತದೆ. ಈ ಪಟ್ಟಿಯನ್ನು ಆಯ್ಕೆ ಸಮಿತಿಗೆ ಕಳುಹಿಸಲಾಗುತ್ತದೆ.
ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನಮಂತ್ರಿ, ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ಒಳಗೊಂಡ ಉನ್ನತಮಟ್ಟದ ಸಮಿತಿ ಚರ್ಚಿಸಿ ನಿರ್ಧಾರ ಮಾಡಿದೆ, ಈ ಪ್ರಕ್ರಿಯೆಯಲ್ಲಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ರವರನ್ನು ನೇಮಕಗೊಳಿಸಲಾಗಿದೆ.