ನ್ಯೂಸ್ ನಾಟೌಟ್ : ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿದ ಬಗ್ಗೆ ಮೇ. 26 ರಂದು ವರದಿ ತಿಳಿಸಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಎಂದು ಗುರುತಿಸಲಾಗಿದ್ದು, ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ.