ನ್ಯೂಸ್ ನಾಟೌಟ್: ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ ಮೇಲೆ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂಬುದು ಕೈ ಪಾಳಯದ ಹುರುಪು ಇಮ್ಮಡಿಗೊಳಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭ್ಯರ್ಥಿಗಳಿಗೆ ಎರಡು ತಾಸು ವರ್ಚುವಲ್ ಮೂಲಕ ಪಾಠ ಮಾಡಿದ್ದಾರೆ.
ವರ್ಚುವಲ್ ಸಭೆಯಲ್ಲಿ ನಾಯಕರು, ಸ್ಟ್ರಾಂಗ್ ರೂಂಗಳ ಮೇಲೆ ಗಮನ ಇಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರ ರಚಿಸುವ ಅವಕಾಶ ಸಿಗಲಿದೆ. ಆಪರೇಷನ್ಗೆ ಒಳಗಾಗಬೇಡಿ, ಅನ್ಯ ಪಕ್ಷಗಳ ಆಮಿಷಗಳಿಗೆ ಬಲಿಯಾಗಬೇಡಿ. ಲೀಡ್ ಸಿಗುತ್ತಿದ್ದಂತೆ ಬೆಂಗಳೂರಿಗೆ ಬನ್ನಿ. ಸರ್ಕಾರ ರಚನೆಯಾಗುವವರೆಗೂ ನಾವು ಸೂಚಿಸಿದ ಸ್ಥಳದಲ್ಲಿ ಇರಬೇಕು ಎಂದು ಅಭ್ಯರ್ಥಿಗಳಿಗೆ ನಾಯಕರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.