ನ್ಯೂಸ್ ನಾಟೌಟ್ : ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆ ನಂತರ ವಿವಿಧ ಪಕ್ಷಗಳು ಲೆಕ್ಕಾಚಾರ ಹಾಕಿ ಟಿಕೆಟ್ ನೀಡಿದ್ದವು. ಟಿಕೆಟ್ ಸಿಗದ ಅಸಮಾಧಾನಿತರು ಪಕ್ಷ ತೊರೆದು ಹೊರಬಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ನಂತರ ಕೆಲವರು ಹಿಂದಕ್ಕೆ ಪಡೆದುಕೊಂಡಿದ್ದರು.
ಬದಲಾದ ರಾಜಕಾರಣ ವ್ಯವಸ್ಥೆಯಲ್ಲಿ ಒಂದು ಕಾಲದಲ್ಲಿ ಬಿಜೆಪಿಯ ನಾಯಕರಾಗಿ ಸಚಿವರೂ ಆಗಿದ್ದ ಜನಾರ್ದನ ರೆಡ್ಡಿ ತಮ್ಮದೇ ಪಕ್ಷ ಸ್ಥಾಪನೆ ಮಾಡಿದ್ದರು. 224 ರಲ್ಲಿ ನಾಲ್ಕು ಸ್ಥಾನ ಇತರರ ಪಾಲಾಗಿದೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹಾಗೂ ಸರ್ವೋದಯ ಕರ್ನಾಟಕ ಪಕ್ಷದಿಂದ ತಲಾ ಒಬ್ಬರು ಜಯ ಗಳಿಸಿದ್ದಾರೆ.
1. ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಪುಟ್ಟಣಯ್ಯ ಗೆದ್ದಿದ್ದಾರೆ. ಅವರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ಸೂಚಿಸಿತ್ತು.
2. ಜೆಡಿಎಸ್ ಮತ್ತು ದರ್ಶನ್ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು ಸಿಎಸ್ ಪುಟ್ಟರಾಜು ಸೋಲು ಕಂಡಿದ್ದರು.
3. ಪಕ್ಷೇತರರಾಗಿ ಹರಪನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪುತ್ರಿ ಎಂ.ಪಿ. ಲತಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ.
4. ಗೌರಿಬಿದನೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಪುಟ್ಟಸ್ವಾಮಿ ಗೌಡ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ನ ಶಿವಶಂಕರ್ ರೆಡ್ಡಿ ಅವರನ್ನು ಪುಟ್ಟಸ್ವಾಮಿಗೌಡ ಸೋಲಿಸಿದ್ದು ವಿಧಾನಸಭೆ ಪ್ರವೇಶಿಸಿದ್ದಾರೆ ಎಂದು ವರದಿ ತಿಳಿಸಿದೆ.
ಕರುನಾಡ ಚುನಾವಣೆಯಲ್ಲಿ ಒಟ್ಟು 4 ಸ್ಥಾನ ಗೆದ್ದ ಇತರಲ್ಲಿ ಹೆಚ್ಚಿನವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಮುನ್ಸೂಚನೆಗಳು ದೊರೆತಿವೆ.