ನ್ಯೂಸ್ ನಾಟೌಟ್ : ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಬಾಲಕಿ ಸಾವಿಗೀಡಾದ ಘಟನೆ ಮಡಿಕೇರಿಯ ಗೋಣಿಕೊಪ್ಪಲಿನ ಕೋಟೂರು ಗ್ರಾಮದಿಂದ ವರದಿಯಾಗಿದೆ.
ಪೆಮ್ಮಂಡ ರೋಶನ್, ಇಸು ದಂಪತಿ ಪುತ್ರಿ ಸಿಯಾನ್ (3) ಮೃತ ಕಂದಮ್ಮ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಬಲೂನ್ನಲ್ಲಿ ಆಟವಾಡುತ್ತಿದ್ದಾಗ ಮನೆಯ ಸಮೀಪವಿದ್ದ ಬಾವಿಗೆ ಬಲೂನ್ ಬಿದ್ದಿದೆ. ಇದನ್ನು ತೆಗೆಯಲು ಪ್ರಯತ್ನಿಸುತ್ತಿದ್ದ ಸಂದರ್ಭ ಬಾಲಕಿ ಬಾವಿಗೆ ಜಾರಿ ಬಿದ್ದಿದೆ ಎನ್ನಲಾಗಿದೆ. ಮನೆಯ ಒಳಗೆ ಇದ್ದ ಪಾಲಕರು ಮಗುವನ್ನು ಹುಡುಕಿಕೊಂಡು ಬಂದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.ಬೀರ್ಯ ಕೊಡವ ಸಿನಿಮಾದಲ್ಲಿ ಸಿಯಾನ್ ಪಾತ್ರ ಮಾಡಿದ್ದು, ಸಾರ್ವಜನಿಕವಾಗಿ ಸಂತಾಪ ಸೂಚಿಸಿದ್ದಾರೆ.