ನ್ಯೂಸ್ ನಾಟೌಟ್ : ಕೊಡಗಿನಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಮುನ್ನೆಚ್ಚರಿಕೆಯಾಗಿ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿಂದ ಹಾರಂಗಿ ಜಲಾಶಯದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯ ಅಭ್ಯಾಸ ಬುಧವಾರ ನಡೆಸಿದೆ .
ಕಳೆದ ನಾಲ್ಕೈದು ವರ್ಷಗಳಲ್ಲಿ ಮಳೆಯಿಂದ ಕೊಡಗಿನಲ್ಲಿ ಎದುರಾಗಿರುವ ಭೂಕುಸಿತ, ಪ್ರವಾಹದ ಸ್ಥಿತಿಗಳನ್ನು ಗಮನಿಸಿ ಅಧ್ಯಯನ ಮಾಡಿರುವ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯ ಐದು ತಾಲ್ಲೂಕುಗಳ 45 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭೂಕುಸಿತ ಮತ್ತು 40 ಗ್ರಾಮಗಳಿಗೆ ಪ್ರವಾಹ ಭೀತಿ ಸಾಧ್ಯತೆ ಇದ್ದು, ಕೂಡಲೇ ಅವರನ್ನು ಸುರಕ್ಷಿತ ಜಾಗಕ್ಕೆ ಶಿಪ್ಟ್ ಮಾಡಲು ಕೊಡಗು ಜಿಲ್ಲಾಧಿಕಾರಿ ಡಾ. ಸತೀಶ ಬಿ.ಸಿ ಆದೇಶಿಸಿದ್ದಾರೆ.
ಈ ಮುಂಜಾಗತ್ರ ಕ್ರಮವಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೇತೃತ್ವದಲ್ಲಿ ಸುಮಾರು ೩೦ ಮಂದಿ ಅಧಿಕಾರಿಗಳಿದ್ದು, ಪ್ರವಾಹ ಎದುರಾದರೆ ಜನರನ್ನು ರಕ್ಷಣೆ ಮಾಡುವುದು ಮತ್ತು ಪೂರ್ವ ತಯಾರಿಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ಸೋಮವಾರಪೇಟೆಯ ಡಿ.ವೈ.ಎಸ್.ಪಿ, ಕುಶಾಲ ನಗರ ಸಿಪಿಐ, ಮಡಿಕೇರಿ ಆರ್.ಪಿ.ಐ ,ಡಿ.ಎ.ಆರ್, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.