ನ್ಯೂಸ್ ನಾಟೌಟ್: ಮಂಗಳೂರು ವಿಮಾನ ನಿಲ್ದಾಣದ ಸಮೀಪ ಸಂಭವಿಸಿದ ವಿಮಾನ ಅಪಘಾತಕ್ಕೆ 13 ವರ್ಷವಾದ ಹಿನ್ನೆಲೆಯಲ್ಲಿ ಸೋಮವಾರ ಶ್ರದ್ದಾಂಜಲಿ ಸಭೆಯನ್ನು ಕರೆಯಲಾಗಿತ್ತು.
ಕುಳೂರು ನದಿ ತಟದಲ್ಲಿ ನಿರ್ಮಿಸಿದ ಸ್ಮಾರಕ ದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಭೆ ಜರಗಿತು. ವಿಮಾನ ದುರಂತದಿಂದ ಕೆಲವರ ಮೃತದೇಹ ಗುರುತು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕುಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಆ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ಅನ್ನು ನಿರ್ಮಿಸಲಾಗಿದೆ. ಅಲ್ಲಿ ಪ್ರತಿ ವರ್ಷ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿಯನ್ನು ಮೇ.22ರಂದು ಬೆಳಗ್ಗೆ ಸಲ್ಲಿಸಲಾಗುತ್ತದೆ.