ನ್ಯೂಸ್ ನಾಟೌಟ್: ಕಳೆದ ಭಾನುವಾರ ಎಲ್ಲೆಡೆ ನೀಟ್(NEET) ಪರೀಕ್ಷೆ ನಡೆದಿದೆ. ಡಾಕ್ಟರ್ ಆಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಪರೀಕ್ಷೆಗೂ ಮುಂಚೆ ವಿದ್ಯಾರ್ಥಿಗಳನ್ನು ಚೆಕ್ ಮಾಡುವುದು ಸಹಜ ಪ್ರಕ್ರಿಯೆ ಆದರೆ ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿನಿಯರ ಒಳ ಉಡುಪು ತೆಗೆಸಿ ಚೆಕ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇನ್ನು ಕೆಲ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಬಟ್ಟೆ ವಿನಿಮಯ ಮಾಡಿಕೊಂಡಿದ್ದಾರೆ. ಈ ವಿಚಾರ ತಡವಾಗಿ ಬೆಳಗಿಗೆ ಬಂದಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಬೇಸರವನ್ನು ಹೇಳಿಕೊಂಡಿದ್ದಾರೆ. ಈ ವಿಷಯವನ್ನು ಕೆಲ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.