ನ್ಯೂಸ್ ನಾಟೌಟ್: ಅಧಿಕಾರಕ್ಕೆ ಬರುವ ಮುನ್ನ ಕರ್ನಾಟಕದ ಜನತೆಗೆ ಗ್ಯಾರಂಟಿ ಕಾರ್ಡ್ ನಲ್ಲಿ ಹಲವು ಭರವಸೆ ನೀಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿದ್ದಂತೆ ತನ್ನ ವರಸೆಯನ್ನು ಬದಲಿಸುವ ಮುನ್ಸೂಚನೆ ನೀಡಿದೆ ಎನ್ನಲಾಗಿದೆ.
ಎಲ್ಲ ಗ್ಯಾರಂಟಿಗಳಿಗೆ ಷರತ್ತು ಅನ್ವಯಿಸುತ್ತದೆ ಅನ್ನುವ ಮೂಲಕ ಶಾಸಕ ಡಾ ಜಿ.ಪರಮೇಶ್ವರ್ ಹೊಸಾ ಬಾಂಬ್ ಸಿಡಿಸಿದ್ದಾರೆ.
ಹೌದು, ಈ ಬಗ್ಗೆ ಪ್ರತಿಕ್ರಿಯಿಸಿದ ಡಾ ಜಿ. ಪರಮೇಶ್ವರ್ , ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಕೊಡುವ ವಿಚಾರದಲ್ಲಿ ಮಹಿಳೆಯರ ಆದಾಯ ಮತ್ತು ಬಡತನ ವರ್ಗದ ಆಧಾರದಲ್ಲಿ ವಿಂಗಡಿಸಲಾಗುತ್ತದೆ, ಕಾಂಗ್ರೆಸ್ ನ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಭಾಗದ ಜನರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಶುಲ್ಕ ಪಾವತಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಮೊದಲ ಕ್ಯಾಬಿನೆಟ್ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿದ್ದೇವೆ ಮತ್ತು ಮೊದಲ ಕ್ಯಾಬಿನೆಟ್ನಲ್ಲಿ ಜಾರಿ ಮಾಡುತ್ತೇವೆ ಆದರೆ ಅದಕ್ಕೆ ಕೆಲವು ಮಾನದಂಡಗಳಿವೆ ಎಂದು ಅವರು ಗ್ಯಾರಂಟಿ ಭಾಗ್ಯಗಳ ಬಗ್ಗೆ ಗೊಂದಲದ ಮಾತನಾಡಿದ್ದು ಹಲವು ಪ್ರಶ್ನೆಗಳಿಗೆ ಕಾರಣವಾಗದೆ.