ನ್ಯೂಸ್ ನಾಟೌಟ್ :ಮದುವೆಯಾಗಬೇಕಿದ್ದ ಮದುಮಗಳೊಬ್ಬಳು ಮದುವೆಯ ಕನಸು ಕಾಣುತ್ತಿರುವ ವೇಳೆ ಆಕೆ ಮಲಗಿದ್ದ ಎರಡನೇ ಮಹಡಿಗೆ ಬೆಂಕಿ ಆವರಿಸಿಕೊಂಡಿದೆ.ಪರಿಣಾಮ ವಧು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಪೈಜ್ ರಡ್ಡಿ (19 ವರ್ಷ) ಸಾವನ್ನಪ್ಪಿರುವ ಯುವತಿ. ಈ ಘಟನೆ ಅಮೇರಿಕಾದ ವಿಸ್ಕಾನ್ಸಿನ್ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಮೇ 23ರಂದು ಬೆಳಗ್ಗಿನ ಜಾವ ಯುವತಿ ಪೈಜ್ ರಡ್ಡಿ ರೀಡ್ಸ್ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ನಿದ್ರಿಸುತ್ತಿದ್ದ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದೆ. ಹೊಗೆಯಿಂದಾಗಿ ಉಸಿರುಗಟ್ಟಿದ್ದು, ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದೆ.ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾಳೆ ಎಂದು ವರದಿಗಳು ತಿಳಿಸಿವೆ.ಇನ್ನೂ ಈ ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಅಲ್ಲದೇ ಘಟನೆ ನಡೆದ ಸಂದರ್ಭ ಇನ್ನೂ ಮೂವರು ಮನೆಯಲ್ಲಿದ್ದು, ಅಗ್ನಿಶಾಮಕ ದಳ ಬರುವಷ್ಟರಲ್ಲಿ ಬೆಂಕಿಯಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.