ನ್ಯೂಸ್ ನಾಟೌಟ್ : ಕರ್ನಾಟಕ ಸಿಎಂ ಆಯ್ಕೆ ಗೊಂದಲದ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಬುಧವಾರ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ, ನಾಳೆ ಅಥವಾ ನಾಡಿದ್ದು ನೂತನ ಸಿಎಂ ಘೋಷಣೆ ಸಾಧ್ಯತೆ ಇದೆ ಎಂದು ತಿಳಿಸಿದರು.
ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ನಿಮಗೆ ತಿಳಿಸುತ್ತೇವೆ. ಮುಂದಿನ 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಸುರ್ಜೇವಾಲಾ ಹೇಳಿದರು.