ನ್ಯೂಸ್ ನಾಟೌಟ್ ಪ್ರತಿನಿಧಿ ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡುತ್ತಿರುವ ಸರ್ಕಾರಿ ಕಾಲೇಜಿನ ಗ್ರಂಥಪಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪುತ್ತೂರು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಯಿತು. ಗ್ರಂಥಪಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳದಿದ್ದಲ್ಲಿ ಕಾಲೇಜು ಮುಂದೆ ಪ್ರತಿಭಟನೆ ಮಾಡುವುದಾಗಿ ಎನ್ಎಸ್ಯುಐ ನಿಯೋಗ ಎಚ್ಚರಿಕೆ ನೀಡಿದೆ.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರಂಥಪಾಲಕ ಪ್ರವೀಣ್ ವಗ್ಗ ಅವರು ಸರ್ಕಾರಿ ನೌಕರರಾಗಿ ಒಂದು ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸರ್ಕಾರಿ ನೌಕರ ಯಾವುದೇ ರಾಜಕೀಯ ಪಕ್ಷದ ಪರ ಇರುವಂತಿಲ್ಲ. ಈ ನಿಟ್ಟಿನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಎನ್ಎಸ್ಯುಐ ಮನವಿ ಮಾಡಿದೆ.
ಈ ಸಂದರ್ಭ ಎನ್.ಎಸ್ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾತಿಶ ಅಳಕೆಮಜಲು, ಅಡ್ವರ್ಡ್ ಡಿಸೋಜ, ಗಗನ್ದೀಪ್, ನವೀನ್ ಬನ್ನೂರು, ಆಸ್ಟಿನ್ ಉಪಸ್ಥಿತರಿದ್ದರು.