ನ್ಯೂಸ್ ನಾಟೌಟ್ : ಕಾರ್ಕಳ ಬಿಜೆಪಿ ಅಭ್ಯರ್ಥಿ ಮತ್ತು ಇಂಧನ ಸಚಿವ ಸುನೀಲ್ ಕುಮಾರ್ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ಮೂಲಕ ಅವರು ಪ್ರತಿಕ್ರಿಯಿಸಿದ್ದು ಪ್ರಣಾಳಿಕೆ ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ ಎಂದು ಹೇಳಿದ್ದಾರೆ ಹೇಳಿದ್ದಾರೆ.
ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ವಿ ಸುನೀಲ್ ಕುಮಾರ್, “ಡಿಕೆಶಿ, ಸಿದ್ದರಾಮಯ್ಯನವರೇ, ನಾವು ಪಿಎಫ್ ಐ ನಿಷೇಧ ಮಾಡಿದ್ದೇವೆ. ಅದೇ ಸಂಕಟ ಹಾಗೂ ದ್ವೇಷವನ್ನು ಬಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ?. ನಿಮ್ಮ ಹಿಂದು ವಿರೋಧಿ ನಿಲುವಿಗೆ ಧಿಕ್ಕಾರ. ಬಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ. ಹಿಂದೂಗಳ ರಕ್ಷಣೆಗೆ, ಗೋಮಾತೆಯ ಹಿತಕ್ಕೆ, ಹಿಂದು ಸೋದರಿಯರ ಮಾನ ಸಂರಕ್ಷಣೆಗೆ ಸಿದ್ಧವಾಗಿರುವ ಕಾರ್ಯಕರ್ತರ ಪಡೆ. ಮುಸ್ಲಿಂ ಓಲೈಕೆಗಾಗಿ ಬಜರಂಗದಳ ನಿಷೇಧಿಸುತ್ತೇವೆಂಬ ದಾಷ್ಟ್ಯವೇ ?” ಎಂದು ಆಕ್ರೋಶ ಹೊರಹಾಕಿದ್ದಾರೆ.
“ಬಜರಂಗದಳ ಹಾಗೂ ಪಿಎಫ್ ಯನ್ನು ಒಂದೇ ತಕ್ಕಡಿಯಲ್ಲಿ ಅಳತೆ ಮಾಡುವ ಕಾಂಗ್ರೆಸಿಗರ ಮನಸ್ಸು ರೋಗಗ್ರಸ್ಥವಾಗಿದೆ. ಪಿಎಫ್ಐ ಒಂದು ಭಯೋತ್ಪಾದಕ ಸಂಘಟನೆ ಎಂಬ ಕಾರಣಕ್ಕೆ ನಿಷೇಧ ಮಾಡಿದ್ದೇವೆ. ಬಜರಂಗದಳ ಹಿಂದೂ ಸಮಾಜ ಮತ್ತು ದೇಶ ಹಿತದ ಸಂಘಟನೆ. ದೇಶಪ್ರೇಮವನ್ನು ಕಾಂಗ್ರೆಸ್ ನಿಷೇಧಿಸುತ್ತದೆಯೇ?” ಎಂದು ಟ್ವೀಟ್ ಮೂಲಕ ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ ಸುನೀಲ್ ಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.