ನ್ಯೂಸ್ ನಾಟೌಟ್: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಮಂದಿಯನ್ನು ಹತ್ಯೆ ಮಾಡಿರುವುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸುಳ್ಳು ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭೆ ಸದಸ್ಯ ಮೊಹಮ್ಮದ್ ರಿಯಾಝ್ ಕೆ.ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವ ಸಂದರ್ಭ ಶಾಸಕ ಹರೀಶ್ ಪೂಂಜ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿರುವುದಾಗಿ ಹೇಳಿದ್ದಾರೆ. ಈ ಕುರಿತು ವಿಡಿಯೋ ಚಿತ್ರಣವೂ ಇದೆ. ಮುಖ್ಯಮಂತ್ರಿಗಳ ವಿರುದ್ಧ ಈ ರೀತಿಯ ಆರೋಪ ಮಾಡಿರುವುದು ಸರಿಯಲ್ಲ. ಆದ್ದರಿಂದ ಹರೀಶ್ ಪೂಂಜ ಅವರನ್ನು ತನಿಖೆ ಮಾಡಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ. ದೂರು ನೀಡುವ ಸಂದರ್ಭ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ ಬನ್ನೂರು, ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋನು ಬಪ್ಪಳಿಗೆ ಮತ್ತಿತರರಿದ್ದರು.