ನ್ಯೂಸ್ ನಾಟೌಟ್: ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.
ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ಕಂಠೀರವ ಕ್ರೀಡಾಂಗಣದ ಪ್ರವೇಶ ದ್ವಾರದ ಬೆಳಗ್ಗೆಯೇ ನೂಕುನುಗ್ಗಲು ಉಂಟಾಗಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ತ ಳ್ಳಾಟ ನೂಕಾಟದಲ್ಲಿ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೂಕುನುಗ್ಗಲಾದ ಹಿನ್ನೆಲೆ ಸ್ಥಳಕ್ಕೆ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಆಗಮಿಸಿ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮತ್ತು ಸಾರ್ವಜನಿಕ ಪ್ರವೇಶ ದ್ವಾರ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.