ನ್ಯೂಸ್ ನಾಟೌಟ್: ಜನಪ್ರಿಯ ಕಾರು ತಯಾರಕ ಕಂಪನಿಯಾದ ಎಂಜಿ ಮೋಟಾರ್ ತನ್ನ ಹೊಸ ಎಂಜಿ ಕಾಮೆಟ್ ಎಂಬ ಹೊಸ ಪುಟ್ಟ ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಎಪ್ರಿಲ್ 29 ರಂದು ಬಿಡುಗಡೆಗೊಳಿಸಿತು.
ಈ ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಪ್ರಾರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.7.98 ಲಕ್ಷ ರೂಪಾಯಿಗಾಗಿವೆ. ಈ ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಟೆಸ್ಟ್ ಡ್ರೈವ್ಗಳು ಪ್ರಾರಂಭವಾಗಿದ್ದು, ಇನ್ನು ಈ ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಮೇ 15 ರಂದು ಪ್ರಾರಂಭವಾಗುತ್ತದೆ ಎಂದು ಕಂಪನಿ ತಿಳಿಸಿದೆ.
ಈ ಕಾರಿನ ಹೆಸರು ಇಂಗ್ಲೆಂಡ್-ಆಸ್ಟ್ರೇಲಿಯಾ ಮ್ಯಾಕ್ರಾಬರ್ಟ್ಸನ್ ಏರ್ ರೇಸ್ನಲ್ಲಿ ಭಾಗವಹಿಸಿದ 1934 ರ ಸಾಂಪ್ರದಾಯಿಕ ಬ್ರಿಟಿಷ್ ವಿಮಾನದಿಂದ ಸ್ಫೂರ್ತಿ ಪಡೆದು ತಯಾರಿಸಲಾಗಿದೆ ಎಂದು ವರದಿ ತಿಳಿಸಿದೆ.
ಇನ್ನು ಈ ಕಾರಿನಲ್ಲಿ ಸುರಕ್ಷತೆಗಾಗಿ ಎಬಿಎಸ್, ಈಬಿಡಿ, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ರಿವರ್ಸ್ ಕ್ಯಾಮೆರಾ ಮತ್ತು ಸೆನ್ಸರ್ಗಳು ಮತ್ತು ಡ್ಯುಯಲ್ ಫ್ರಂಟ್ ಏರ್ಬ್ಯಾಗ್ಗಳ ವಿಭಿನ್ನ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಕಾರಿನಲ್ಲಿ ೧ ಕಿಲೋ ಮೀಟರ್ ಚಲಿಸಲು ಕೇವಲ ೫೦ ಪೈಸೆಯಿಂದ ಒಂದು ರೂಪಾಯಿಯಷ್ಟು ಖರ್ಚು ಬೀಳಬಹುದು ಎಂದು ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ.