ನ್ಯೂಸ್ ನಾಟೌಟ್ : ಸುಳ್ಯ ತಾಲೂಕು ಪಂಚಾಯತ್ ಮುಂಭಾಗದಲ್ಲಿ ವಿವಿಧ ಯೋಜನೆಯ ಫಲಾನುಭವಿಗಳಿಗೆ ಶಾಸಕಿ ಕು. ಭಾಗೀರಥಿ ಮುರುಳ್ಯ ಬುಧವಾರ ಸವಲತ್ತುಗಳನ್ನು ಹಸ್ತಾಂತರಿಸಿದರು.
ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ವತಿಯಿಂದ 2022-23ನೇ ಸಾಲಿನ ವೃತ್ತಿಪರ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳ ವಿತರಣಾ ಕಾರ್ಯಕ್ರಮದಲ್ಲಿ ಇಲೆಕ್ಟ್ರಿಕಲ್ , ಗಾರೆ , ಹೊಲಿಗೆ ಯಂತ್ರ , ಬಡಗಿ, ಕಮ್ಮಾರಿಕೆ , ಅಟೋಮೊಬೈಲ್ ಒಟ್ಟು 67 ಫಲಾನುಭವಿಗಳಿಗೆ ಸುಧಾರಿತ ಉಪಕರಣ ಹಾಗೂ 2022-23ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದ ಶೇ.5 ಅನುದಾನದಲ್ಲಿ ವಿಕಲಚೇತನರಿಗೆ 5 ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ಈ ವೇಳೆ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ , ಜಿ.ಪಂ. ಮಾಜಿ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ , ಸುಳ್ಯ ತಹಶೀಲ್ದಾರ್ ಜಿ. ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಮಹೇಶ್ ಕುಮಾರ್ ಮೇನಾಲ, ಅಶೋಕ್ ಅಡ್ಕಾರ್ ಮತ್ತಿತರರು ಉಪಸ್ಥಿತರಿದ್ದರು.