ನ್ಯೂಸ್ ನಾಟೌಟ್ : ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ತುಳು ಸಾಹಿತ್ಯ ಅಕಾಡೆಮಿಗೆ ತುಳು ಭಾಷಾ ಅಭಿವೃದ್ಧಿ ಪ್ರಾಧಿಕಾರದ ಸ್ಥಾನಮಾನ ನೀಡಿ ಪ್ರಾಧಿಕಾರದ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುವು ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಜೊತೆಗೆ ತುಳು ಅಕಾಡೆಮಿಗೆ ವಾರ್ಷಿಕ 5 ಕೋಟಿ ರೂ ಅನುದಾನ ಮತ್ತು ಕೊಡವ ಸಂಸ್ಕೃತಿಯ ಅಭಿವೃದ್ಧಿಗಾಗಿ ಕೊಡವ ಅಕಾಡೆಮಿಗೆ 1 ರೂ ಕೋಟಿ ಅನುದಾನ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
ಗ್ಯಾರಂಟಿ ಘೋಷಣೆಯ ಮೂಲಕ ಹಲವು ಭರವಸೆಯನ್ನು ರಾಜ್ಯದ ಜನರಿಗೆ ನೀಡಿದ್ದ ಕಾಂಗ್ರೆಸ್ ಇಂದು ಪ್ರಣಾಳಿಕೆ ಮೂಲಕ ಮತ್ತಷ್ಟು ಭರವಸೆಗಳನ್ನು ನೀಡಿದ್ದು ಹಲವರ ಗಮನ ಸೆಳೆದಿದೆ ಮತ್ತು ಇನ್ನು ಕೆಲವರ ಆಕ್ರೋಶಕ್ಕೂ ಕಾರಣವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಜಿ. ಪರಮೇಶ್ವರ್ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.