ನ್ಯೂಸ್ ನಾಟೌಟ್ : ವಿದ್ಯಾರ್ಥಿಯೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದಿಂದ ವರದಿಯಾಗಿದೆ. ಅಡಕ್ಕಲ್ ಕುಮಾರಧಾರ ನದಿಯ ಬಳಿ ಈ ಘಟನೆ ನಡೆದಿದ್ದುಮ, ಶರೀಪುದ್ದೀನ್(19) ಮೃತ ಯುವಕ ಎಂದು ಗುರುತಿಸಲಾಗಿದೆ.
ಘಟನೆಯ ಬಗ್ಗೆ ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.ಯುವಕ ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.ದೂರಿನಲ್ಲಿ ಸಾರ್ವಜನಿಕರ ಮೂಲಕ ನನ್ನ ತಂಗಿಯ ಮಗನಿಗೆ ಅಡೆಕ್ಕಲ್ ಕುಮಾರಧಾರ ನದಿ ಕಿನಾರೆಯ ಬಳಿ ವಿದ್ಯುತ್ ಸ್ಪರ್ಶವಾಗಿ ಅಸ್ವಸ್ಥಗೊಂಡಿರುವ ಬಗ್ಗೆ ಮಾಹಿತಿ ಬಂದಿದೆ.ಸ್ಥಳೀಯರು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಪುತ್ತೂರು ಸರಕಾರಿ ಆಸ್ಪತ್ರೆಗೆ ತೆರಳಿ ನೋಡಿದಾಗ ಮೃತಪಟ್ಟಿದ್ದು ಆತನ ಎದೆಯ ಭಾಗದಲ್ಲಿ ವಿದ್ಯುತ್ ಸ್ಪರ್ಶ ಆಗಿರುವುದು ಕಂಡು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.