ನ್ಯೂಸ್ ನಾಟೌಟ್: ಮೇ 10ರಂದು ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಮೇ 9 ಮತ್ತು 10ರಂದು ನಿಗಮದ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಹೀಗಾಗಿ ಬಸ್ ನಲ್ಲಿ ಪ್ರಯಾಣಿಸುವವರು ಸಹಕರಿಸಬೇಕಾಗಿ ಕೋರಲಾಗಿದೆ.
ದೂರದೂರುಗಳಿಗೆ ಬಸ್ ನಲ್ಲಿ ಪ್ರಯಾಣಿಸುವವರು ಚುನಾವಣೆಗೂ ಮುಂಚಿತವಾಗಿ ಹಂತಹಂತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಯೋಜಿಸಿಕೊಂಡು ನಿಗಮದ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.