ನ್ಯೂಸ್ ನಾಟೌಟ್ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭಾಗೀರಥಿ ಮುರುಳ್ಯ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
30875 ಮತಗಳ ಅಂತರದಿಂದ ಜಯಭೇರಿ ಬಾರಿಸಿದ ಭಾಗೀರಥಿ ಮುರುಳ್ಯ ಅವರಿಗೆ ಎಸ್.ಅಂಗಾರ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅವರನ್ನು ಗೆಲ್ಲಿಸಲು ಕಾರಣಕರ್ತರಾದ ಮತದಾರ ಬಾಂಧವರಿಗೆ ಹಾಗೂ ಪಕ್ಷದ ಹಿರಿಯ,ಕಿರಿಯ ನಾಯಕರಿಗೆ,ಕಾರ್ಯಕರ್ತರಿಗೆ ಸಚಿವ ಎಸ್.ಅಂಗಾರರವರು ಈ ಸಂದರ್ಭದಲ್ಲಿ ಹೃದಯಾಂತರಾಳದ ಕೃತಜ್ಞತೆಗಳನ್ನು ಸಲ್ಲಿಸಿದರು.