ನ್ಯೂಸ್ ನಾಟೌಟ್ :ರಾಜ್ಯದ ಹಲವೆಡೆ ಕಳೆದ ಒಂದು ವಾರಗಳಿಂದ ಬಾರಿ ಮಳೆಯಾಗುತ್ತಿರುವ ಬಗ್ಗೆ ವರದಿಯಾಗುತ್ತಿದೆ.ಹವಾಮಾನ ಇಲಾಖೆ ಪ್ರಕಾರ ಇನ್ನೆರಡು ದಿನ ಇದೆಯೆಂದು ಹೇಳಲಾಗಿದೆ.ಹೆಚ್ಚಿನ ಕಡೆಗಳಲ್ಲಿ ಮಧ್ಯಾಹ್ನ ತನಕ ಉರಿಬಿಸಿಲು ಕಂಡು ಬರುತ್ತಿದ್ದು,ಮಧ್ಯಾಹ್ನ ವೇಳೆ ಮೋಡ ಕವಿದ ವಾತಾರಣ ಕಂಡು ಬರುತ್ತಿದೆ.ಬಳಿಕ ಸಂಜೆಯಾಗುತ್ತಿದ್ದಂತೆ ವ್ಯಾಪಕ ಧಾರಾಕಾರ ಮಳೆ ಸುರಿಯಲಾರಂಭಿಸುತ್ತದೆ.
ಹವಾಮಾನ ಇಲಾಖೆಯ ವರದಿ ಪ್ರಕಾರ ಉಡುಪಿ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.ಈ ನಾಲ್ಕು ಜಿಲ್ಲೆಗಳಲ್ಲಿ ಯಾವುದೇ ಸಂದರ್ಭದಲ್ಲಾದರೂ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.ಗಾಳಿ ವೇಗವು ಗಂಟೆಗೆ 30-40 ಕಿ.ಮೀ. ತಲುಪಲಿದೆ ಎಂದು ವರದಿ ತಿಳಿಸಿದ್ದು,ಒಳನಾಡಿನಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ಮತ್ತು ಕರಾವಳಿಯಲ್ಲಿ 30 ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಸುರಿಯಲಿದ್ದು,ಸಂಜೆ ವೇಳೆಗೆ ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಹೆಚ್ಚು ಇರುವುದರಿಂದ ಈ ವೇಳೆ ವಾಹನಗಳಲ್ಲಿ ಹೊರಗೆ ಹೋಗುವುದು, ಮರದ ಕೆಳಗೆ ಆಶ್ರಯ ಪಡೆಯುವುದು, ಹೊಲಗಳಲ್ಲಿ ಕೆಲಸ ಮಾಡುವುದು ಸೇರಿದಂತೆ ಇನ್ನಿತರ ಚಟುವಟಿಕೆಯಲ್ಲಿ ತೊಡಗುವಾಗ ಮುಂಜಾಗ್ರತೆ ವಹಿಸಲು ಸೂಚನೆ ನೀಡಲಾಗಿದೆ.