ನ್ಯೂಸ್ ನಾಟೌಟ್ : ಬಾಲಿವುಡ್ ನಟ ಸೈಫ್ ಅಲಿಖಾನ್ ಪುತ್ರಿ ಸಾರಾ ಅಲಿಖಾನ್ ಅವರು ಭಾರಿ ಟ್ರೋಲ್ ಆಗಿದ್ದಾರೆ. ಹಿಂದೂ ದೇವಾಲಯಕ್ಕೆ ಭೇಟಿ ಮಾಡಿ ಪೂಜೆ ಸಲ್ಲಿಸಿದ್ದಕ್ಕೆ ಮುಸ್ಲಿಂ ನಟಿ ಸಾರಾ ಅಲಿಖಾನ್ ಅವರಿಗೆ ಭಾರಿ ಟೀಕೆಗಳು ವ್ಯಕ್ತವಾಗಿವೆ.ಇದಕ್ಕೆ ನಟಿ ಪ್ರತಿಕ್ರಿಯಿಸಿ ಇದನ್ನೆಲ್ಲ ನಾನು ಕ್ಯಾರೆ ಮಾಡಲ್ಲ ಎಂದಿದ್ದಾರೆ.
ಹಿಂದೂ ದೇವಾಲಯಕ್ಕೆ ಹೋಗುವುದು, ಪೂಜೆ ಸಲ್ಲಿಸುವುದು, ಹಿಂದೂ ಸಂಪ್ರದಾಯ ಆಚರಿಸುವುದು ಎಲ್ಲವೂ ಗಿಮಿಕ್ ಎಂದು ಕೆಲವರು ಕಾಮೆಂಟ್ ಮಾಡಿದ್ದಕ್ಕೆ ಮುಸ್ಲಿಂ ನಟಿ ನಟಿ ಸಾರಾ ಅಲಿ ಖಾನ್ ಉತ್ತರ ನೀಡುತ್ತಾ, ಯಾರು, ಏನೇ ಹೇಳಿದರೂ ದೇವರ ಮೇಲಿನ ನನ್ನ ನಂಬಿಕೆ ಕಡಿಮೆ ಆಗದು. ಇಂತಹ ಅನೇಕ ಟ್ರೋಲ್ ಗಳನ್ನು ನಾನು ಕಂಡಿದ್ದೇನೆ. ಅವೆಕ್ಕೆಲ್ಲ ನಾನು ಬಗ್ಗಲ್ಲ ಎಂದು ಹೇಳಿದ್ದಾರೆ. ನಾನು ದೇವಸ್ಥಾನಕ್ಕೆ ಹೋಗುವುದು, ಪೂಜೆ ಸಲ್ಲಿಸುವುದು ಅದು ನನ್ನ ನಂಬಿಕೆ. ಅದನ್ನು ಯಾರಿಂದಲೂ ತಡೆಯುವುದಕ್ಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಸಾರಾ ಅಲಿ ಖಾನ್ ನಿನ್ನೆಯಷ್ಟೇ ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದವು. ವಿಕ್ಕಿ ಕೌಶಲ್, ಸಾರಾ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ರಿಲೀಸ್ ಆದ ಬೆನ್ನಲ್ಲೇ ನಟಿ ದೇವರ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಈ ಹಿಂದೆಯೂ ನಟಿ ಕೇದಾರನಾಥಕ್ಕೆ ಹೋಗಿ ಪೂಜೆ ಸಲ್ಲಿಸಿದ್ದು ಬಾರಿ ಸುದ್ದಿಯಾಗಿತ್ತು. ಈಗ ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದು, ಪೂಜೆ ಸಲ್ಲಿಸಿದ್ದಾರೆ. ಗುಲಾಬಿ ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಕಾಣಿಸಿಕೊಂಡ ಅವರು ಅಲ್ಲಿನ ಪುರೋಹಿತರ ಜೊತೆ ಮಾತನಾಡಿದ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಾರಾ, ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿರುವುದಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇದೆಲ್ಲ ಪ್ರಚಾರದ ಗಿಮಿಕ್ ಎಂದು ವ್ಯಂಗ್ಯವಾಡಿದ್ದಾರೆ. ಸಾರಾ ಅಲಿ ಖಾನ್ ಹಿಂದೂ ಧರ್ಮಕ್ಕೆ ಬಂದ್ರಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.