ನ್ಯೂಸ್ ನಾಟೌಟ್: ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡಲು ಜೂನ್ 16 ರಿಂದ ಗೋವಾದ ಶ್ರೀರಾಮನಾಥ ದೇವಸ್ಥಾನದಲ್ಲಿ 11 ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಹಿಂದೂ ನಾಯಕರಾದ ಅರುಣ್ ಪುತ್ತಿಲ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಕರ್ನಾಟಕದಿಂದ ಒಟ್ಟು ಐದು ಮಂದಿ ಭಾಗವಹಿಸಲಿದ್ದಾರೆ. ಅಧಿವೇಶನದಲ್ಲಿ ಅಮೆರಿಕ, ಬಾಂಗ್ಲಾದೇಶ, ನೇಪಾಳ, ಇಂಗ್ಲೆಂಡ್, ಸಿಂಗಾಪುರ ಹಾಗೂ ಭಾರತದಒಟ್ಟು 28 ರಾಜ್ಯದಲ್ಲಿನ 350 ಕ್ಕೂ ಹೆಚ್ಚು ಮಂದಿ ಹಿಂದೂ ಸಂಘಟನೆಯ 1500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಲವ್ ಜಿಹಾದ್, ಹಲಾಲ್, ಲ್ಯಾಂಡ್ ಜಿಹಾದ್, ಮತಾಂತರ, ಗೋಹತ್ಯೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ್ ಗೌಡ ತಿಳಿಸಿದರು.