ನ್ಯೂಸ್ ನಾಟೌಟ್ : ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ವರ್ಷ ಪೂರೈಸಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರ ಆಕ್ಸಿಡೆಂಟ್ ಆಗುತ್ತೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾನುವಾರ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿರುವ ಯತ್ನಾಳ್, ಡಿ.ಕೆ ಶಿವಕುಮಾರ್ ಯಡಿಯೂರಪ್ಪ ಮತ್ತು ಬೊಮ್ಮಾಯಿ ಮನೆಗೆ ಸೌಜನ್ಯದ ಭೇಟಿ ನೀಡಿದ್ದೇನೆ ಅಂತಾರೆ. ಇವರು ಸೌಜನ್ಯದ ಭೇಟಿ ಕೊಡುತ್ತಿಲ್ಲ. ಸೋನಿಯಾ ಗಾಂಧಿ ಹೆದರಿಸುವ ಕೆಲಸ. ಬಸವರಾಜ ಬೊಮ್ಮಾಯಿಯವರೇ (Basavaraj Bommai) ಮನೆವರೆಗೂ ಅವರನ್ನ ಬಿಟ್ಟುಕೊಳ್ಳಬೇಡಿ ಎಂದು ಸಲಹೆ ನೀಡಿದರು.
ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡುತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಬಣ್ಣ ಬಯಲಾಗಲಿದೆ. ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ.
ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಆದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ- ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಎಂದು ಹೇಳಿ. ಅವರನ್ನ ಸ್ವಾಗತಿಸಿಕೊಂಡ್ರೇ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ. ಹಲ್ಕಟ್ಗಿರಿ ಮಾಡುವುದಿದ್ರೆ ಬಿಟ್ಟು ಹೋಗಿ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ. ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರು ಆಗಲಿದ್ದಾರೆ. ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲ ಎಂದು ಸ್ಪಷ್ಟಪಡಿಸಿದರು ಎನ್ನಲಾಗಿದೆ.