ನ್ಯೂಸ್ ನಾಟೌಟ್: ಬಕ್ರೀದ್ ಆಚರಣೆಗೆ ಮುನ್ನವೇ ಈದ್ಗಾ ಮೈದಾನ ವಿವಾದ ಮುನ್ನಲೆಗೆ ಮತ್ತೆ ಎದ್ದಿದೆ. ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಿಎಂ ಸಿದ್ದರಾಮಯ್ಯ ಬರುತ್ತಿರುವುದಕ್ಕೆ ಸರ್ವ ಸಂಘಟನೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿವೆ ಎಂದು ಬುಧವಾರ ವರದಿ ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಅವರು ಈದ್ಗಾ ಮೈದಾನಕ್ಕೆ ಬರಲು ಅವಕಾಶ ನೀಡಬಾರದು ಎಂದು ಸರ್ವ ಸಂಘಟನೆಗಳ ಒಕ್ಕೂಟ ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿ, ಮನವಿ ಮಾಡಿದ್ದಾರೆ. ಆದರೂ ಸಿಎಂ ಸಿದ್ದರಾಮಯ್ಯ ಬಕ್ರೀದ್ ಹಬ್ಬದ ಆಚರಣೆಗೆ ಇಲ್ಲಿಗೆ ಬಂದರೆ ಪ್ರತಿಭಟನೆ ನಡೆಸುವುದಾಗಿ ಸರ್ವ ಸಂಘಟನೆಗಳ ಒಕ್ಕೂಟ ಎಚ್ಚರಿಕೆಯನ್ನೂ ನೀಡಿದೆ.
ಈವರೆಗೂ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ, ಗಣೇಶ ಹಬ್ಬ ಆಚರಣೆಗೆ ಅನುಮತಿ ಕೊಟ್ಟಿಲ್ಲ, ಆದರೆ ಜೂನ್ 29ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಬರುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗಿದೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಅವರ ಆಹ್ವಾನದ ಮೇರೆಗೆ ಸಿಎಂ ಸಿದ್ದರಾಮಯ್ಯ ಬಕ್ರೀದ್ ಆಚರಣೆಯಲ್ಲಿ ಭಾಗಿಯಾಗುತ್ತಿದ್ದಾರೆ. ಇದು ವಿವಾದಿತ ಸ್ಥಳವಾಗಿರುವುದರಿಂದ ಸಿಎಂ ಈ ಆಚರಣೆಯಲ್ಲಿ ಭಾಗಿಯಾಗಬಾರದು ಎನ್ನುವುದು ಸಂಘಟನೆಗಳು ತಿಳಿಸಿವೆ.