ದಾವಣಗೆರೆ: ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ಡಾ.ಕೆ.ಅರುಣ್ ವಿರುದ್ಧ ಗರಂ ಆದ ಘಟನೆ ನಡೆಯಿತು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಮುಗಿಯುತ್ತಿದ್ದಂತೆ ಹೊರಡಲು ಅಣಿಯಾದ ಎಸ್ಪಿ ಅವರನ್ನು ನೋಡಿ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ಏನು ಎಸ್ಪಿನಾ ನೀನು? ಕುಳಿತ್ಕೋ.. ನಾನೇ ಇನ್ನೂ ಕುಳಿತಿದ್ದೀನಿ’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವಿನ್ನೂ ಕುರ್ಚಿಯಲ್ಲಿ ಕುಳಿತೇ ಇದ್ದರೂ ತಮಗಿಂತ ಮೊದಲು ಎಸ್ಪಿ ಎದ್ದಿದ್ದಕ್ಕೆ ಸಿಎಂ ಸಿಟ್ಟಾಗಿ ತಾವು ಎದ್ದ ಮೇಲೆ ಎದ್ದು ಹೋಗುವಂತೆ ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ ನಡೆಯದಂತೆ ಕ್ರಮವಹಿಸಲು ಸೂಚನೆ ನೀಡಿದರು.