ನ್ಯೂಸ್ ನಾಟೌಟ್: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಜ್ಯೋತಿ’ ಯೋಜನೆಯ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದ್ದು, ಈ ಯೋಜನೆಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೊಸ ನಿಬಂಧನೆ ಹಾಕಿದೆ. ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ ಎಂದು ತಿಳಿಸಲಾಗಿದೆ.
ಅಲ್ಲದೇ ಗೃಹ ವಿದ್ಯುತ್ ಬಳಕೆದಾರರಲ್ಲಿ ಒಂದಕ್ಕಿಂತ ಹೆಚ್ಚಿನ ಮೀಟರ್ ಇದ್ದಲ್ಲಿ ಒಂದು ಮೀಟರ್ ಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಈ ಮೂಲಕ ಬಾಡಿಗೆ ಮನೆಯವರಿಗೆ 1ಕ್ಕಿಂತ ಹೆಚ್ಚು ಮೀಟರ್ ಗಳಿದ್ದರೆ ಈ ಯೋಜನೆ ಅನ್ವಯಿಸುವುದಿಲ್ಲ.
ಸರ್ಕಾರ ನೀಡಿರುವ ಆದೇಶದ ಪ್ರಕಾರ ಕಳೆದ 12 ತಿಂಗಳಿನಲ್ಲಿ ಬಳಸಿದ ಯೂನಿಟ್ಗಳ ಆಧಾರದ ಮೇಲೆ ಶೇಕಡಾ 10 ರಷ್ಟು ಹೆಚ್ಚುವರಿ ಬಳಕೆ ಮಾಡಲು ಅನುಮತಿ ನೀಡಿದೆ. ಇದು ಸಂಪೂರ್ಣ ಉಚಿತವಾಗಿರಲಿದೆ.
ಒಂದು ವೇಳೆ 200 ಯೂನಿಟ್ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದರೆ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕಾಗುತ್ತದೆ ಎಂದು ನಿಯಮಗಳನ್ನು ಹಾಕಲಾಗಿದೆ.