ನ್ಯೂಸ್ ನಾಟೌಟ್: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಒಂದೇ ವರ್ಷ ಇರೋದು ಅಂತ ಬಿಜೆಪಿಯವರು ಹೇಳ್ತಾರೆ. ಆದರೆ ಈ ಯೋಜನೆ 5 ವರ್ಷ ಪೂರ್ತಿ ಇರುತ್ತೆ. ಮತ್ತೆ ಚುನಾವಣೆ ಆಗಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಆಮೇಲೂ ಉಚಿತ ಕೊಡ್ತೀವಿ. 10 ವರ್ಷವೂ ಉಚಿತ ಕೊಡ್ತೀವಿ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಮ್ಮ ಸರ್ಕಾರ ಬಂದು 20 ದಿನ ಆಗಿದೆ. ದೇಶದಲ್ಲಿ ನುಡಿದಂತೆ ನಡೆದ ಸರ್ಕಾರ ನಮ್ಮ ಸರ್ಕಾರ. ಬಿಜೆಪಿ 600 ಆಶ್ವಾಸನೆಯಲ್ಲಿ ಜಾರಿಗೆ ತಂದಿದ್ದು ಕೇವಲ 60 ಮಾತ್ರ. ಇದರಲ್ಲೇ ಗೊತ್ತಾಗುತ್ತೆ. ನುಡಿದಂತೆ ನಡೆವ ಸರ್ಕಾರ ಯಾವುದು ಅಂತ ತಿಳಿಯುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.