ನ್ಯೂಸ್ ನಾಟೌಟ್ : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗಾಗಿಯೇ ಇರುವ ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗಲಿದೆ. ಇಷ್ಟು ದಿನ ಆಧಾರ್ ಕಾರ್ಡ್ , ವೋಟರ್ ಐಡಿ ತೋರಿಸಿ ಪ್ರಯಾಣ ಮಾಡುತ್ತಿದ್ದ ಮಹಿಳೆಯರು ಇನ್ಮುಂದೆ ಸ್ಮಾರ್ಟ್ ಕಾರ್ಡ್ ನೊಂದಿಗೆ ಪ್ರಯಾಣ ಮಾಡಬೇಕಾಗುತ್ತದೆ.ಹಾಗಾದ್ರೆ ಈ ಕಾರ್ಡ್ ಎಲ್ಲಿ ಸಿಗುತ್ತೆ ಇಲ್ಲಿದೆ ಡಿಟೇಲ್ಸ್…
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಯ ಸ್ಮಾರ್ಟ್ ಕಾರ್ಡ್ಗಾಗಿ (Shakti smart cards) ಅರ್ಜಿ ಸಲ್ಲಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.ಇದಕ್ಕಾಗಿ ಹೊಸದೊಂದು ಪೋರ್ಟಲ್ ಶೀಘ್ರವೇ ಕಾರ್ಯಾರಂಭವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ.
ಸದ್ಯಕ್ಕೆ ಮುಂದಿನ ಮೂರು ತಿಂಗಳವರೆಗೆ ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್ಗಳನ್ನು ಪಡೆಯಬಹುದು.ಅರ್ಜಿ ಸಲ್ಲಿಸಲು ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು.
ಸೇವಾ ಸಿಂಧು ಪೋರ್ಟಲ್ನಲ್ಲಿ ಈಗಾಗಲೇ ಗೃಹ ಜ್ಯೋತಿ ನೋಂದಣಿಯ ಒತ್ತಡವಿದೆ. ಇನ್ನು ಕೆಲವೇ ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದೆ. ಹೀಗಾಗಿ ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ ಸೇವಾ ಸಿಂಧು ಪೋರ್ಟಲ್ನಲ್ಲಿ ಮಾಡಲಾಗುತ್ತಾ ಅಥವಾ ಹೊಸ ಪೋರ್ಟಲ್ ಮಾಡಲಾಗುತ್ತದೆಯೇ ಎಂಬ ಪ್ರಶ್ನೆ ಈಗ ಚರ್ಚೆಯಲ್ಲಿದೆ.
‘ಶಕ್ತಿ’ ಯೋಜನೆಗೆ ಜೂನ್ 11 ರಂದು ಚಾಲನೆ ನೀಡಲಾಯಿತು. ಅಂದಿನಿಂದ 8,24,93,637 ಮಹಿಳೆಯರು ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ವರದಿಯಾಗಿದೆ. 194,50,13,686(೧೯೪ ಕೋಟಿ ೫೦ ಲಕ್ಷ ೧೩ ಸಾವಿರದ ೬೮೬ ರೂ) ರೂಪಾಯಿ ಮೌಲ್ಯದ ಟಿಕೆಟ್ಗಳನ್ನು ವಿತರಿಸಲಾಗಿದೆ ಎಂದು ಹೇಳಲಾಗುತ್ತಿದೆ.ಶಕ್ತಿ ಯೋಜನೆಯ ಆರಂಭಿಕ ದಿನಗಳಲ್ಲಿ ರಾಜ್ಯಾದ್ಯಂತ ಬಸ್ಗಳಲ್ಲಿ ವಿಪರೀತ ಒತ್ತಡವಿತ್ತು.ಮೊದಲ ವೀಕೆಂಡ್ ದಿನಗಳಾದ ಜೂನ್ 17 ಮತ್ತು 18ರಂದು ಇಡೀ ರಾಜ್ಯದಲ್ಲಿ ಬಸ್ ಸಂಚಾರ ಅಸ್ತವ್ಯಸ್ತವಾಗಿತ್ತು.ಆದರೆ, ಅದರ ನಂತರದ ವೀಕೆಂಡ್ನಲ್ಲಿ ಪರಿಸ್ಥಿತಿ ಸಾಕಷ್ಟು ಸುಧಾರಿಸಿದ್ದು ಕಂಡುಬಂದಿದೆ.