ನ್ಯೂಸ್ ನಾಟೌಟ್: ಹಿಂದೂ ಜಾಗರಣಾ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ರಂಜಿತ್ ಮದ್ದಡ್ಕ, ಉಮೇಶ್ ಕುಲಾಲ್ ಎಂದು ತಿಳಿದು ಬಂದಿದೆ. ಇವರು ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ವ್ಯಕ್ತಿಗೆ ಜೀವ ಬೆದರಿಕೆಯೊಡ್ಡಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ (19ವ)ರವರು ನೀಡಿದ ದೂರಿನಂತೆ ಉಮೇಶ್ ಕುಲಾಲ್, ರಂಜಿತ್ ಮತ್ತಿತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.