ನ್ಯೂಸ್ ನಾಟೌಟ್ : ನೆಹರೂ ಸ್ಮಾರಕ ಮಹಾವಿದ್ಯಾಲಯದಲ್ಲಿ ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಕಾಲೇಜಿನ ನೇಚರ್ ಕ್ಲಬ್ ಘಟಕದ ವತಿಯಿಂದ ಪಶ್ಚಿಮ ಘಟ್ಟಗಳ ಮಹತ್ವ ಮತ್ತು ಅಗತ್ಯ ಕುರಿತಾದ ಮಾಹಿತಿ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಬುಧವಾರ (ಜೂನ್ 28) ಕಾಲೇಜಿನಲ್ಲಿ ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯದ ಕಾರ್ಯದರ್ಶಿ ಹೇಮನಾಥ್ ಕುರುಂಜಿ ಗಿಡಕ್ಕೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೀತಿ ಜಾಗೃತಿ ಕುರಿತಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಪರಿಸರವಾದಿ, ಚಿತ್ರಕಲಾವಿದ ದಿನೇಶ್ ಹೊಳ್ಳ ಮಾತನಾಡಿ, ಪಶ್ಚಿಮ ಘಟ್ಟಗಳು, ಮಳೆ ಬರಲು ಹಾಗೂ ಮಳೆ ನೀರನ್ನು ಸಂಗ್ರಹಿಸಲು ಬೆಟ್ಟ ಗುಡ್ಡ ಶೋಲಾ ಅರಣ್ಯ ವ್ಯವಸ್ಥೆಯ ಬಗ್ಗೆ ಪರಿಚಯ ಮಾಡಿ ಪಶ್ಚಿಮ ಘಟ್ಟಗಳು ಉಳಿವಿನ ಪಣ ತೊಡುವಂತೆ ಕರೆ ನೀಡಿದರು. ಕಾಲೇಜಿನ ಗ್ರಂಥಾಲಯಕ್ಕೆ ಕೆಲವು ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ. ಅಧ್ಯಕ್ಷತೆ ವಹಿಸಿದ್ದರು. ಯುವಜನ ಸಂಯುಕ್ತ ಮಂಡಳಿ ಗೌರವ ಅಧ್ಯಕ್ಷ ದಯಾನಂದ ಕೇರ್ಪಳ, ಕಾರ್ಯದರ್ಶಿ ಸಂಜಯ್ ನೆಟ್ಟಾರ್, ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ. ಉಪಸ್ಥಿತರಿದ್ದರು. ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ತೇಜಸ್ವಿ ಕಡಪಳ ಸ್ವಾಗತಿಸಿ, ನೇಚರ್ ಕ್ಲಬ್ ಸಂಯೋಜಕ ಕುಲದೀಪ್ ಪೆಲ್ತಡ್ಕ ವಂದಿಸಿದರು. ಚಂಪಾ ಮತ್ತು ತಂಡ ಪ್ರಾರ್ಥಿಸಿದರು. ಅರ್ಚನಾ ಅತಿಥಿಗಳನ್ನು ಪರಿಚಯಿಸಿದರು. ನೇಚರ್ ಕ್ಲಬ್ ಕಾರ್ಯದರ್ಶಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು. ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರು, ಕಾಲೇಜಿನ ಉಪನ್ಯಾಸಕರು, ನೇಚರ್ ಕ್ಲಬ್ ಸದಸ್ಯರು ಮತ್ತು ಕಾಲೇಜು ಸಿಬ್ಬಂದಿ ವರ್ಗದವರು ಸಹಕರಿಸಿದರು.