ನ್ಯೂಸ್ ನಾಟೌಟ್: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟ ಘಟನೆ ಶುಕ್ರವಾರ ನೆಟ್ಟಣದಲ್ಲಿ ನಡೆದಿದೆ.
ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.
ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯ ಕೆಳಗಿನ ಒಂದು ಪಾರ್ಶ್ವ ಕುಸಿದ ಪರಿಣಾಮ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಸ್ಥಳೀಯ ಯುವಕರು ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ, ವೈದ್ಯರು ಆತ ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ.