ನ್ಯೂಸ್ ನಾಟೌಟ್: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 10 ಕೆ.ಜಿ. ಅಕ್ಕಿ ನೀಡುವ ಅನ್ನಭಾಗ್ಯ (Anna bhaghya ) ಯೋಜನೆಯನ್ನು ಸರ್ಕಾರ ಮಾರ್ಪಾಡು ಮಾಡಿದ್ದು, 5 ಕೆ.ಜಿ. ಅಕ್ಕಿಯ ಜತೆಗೆ ಉಳಿದ ಐದು ಕೆ.ಜಿ. ಅಕ್ಕಿಯ ಹಣವನ್ನು ಫಲಾನುಭವಿಗಳಿಗೆ ನೀಡಲು ಸರ್ಕಾರ ತೀರ್ಮಾನಿಸಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಅಕ್ಕಿ ದಾಸ್ತಾನು ಕೊರತೆ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. 1 ಕೆ.ಜಿಗೆ ೩೪ ರೂಪಾಯಿಯಂತೆ 5 ಕೆ.ಜಿ. ಅಕ್ಕಿಗೆ 170 ರೂ. ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ.
ಜುಲೈ ತಿಂಗಳಲ್ಲೇ ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ತಿಳಿಸಿದ್ದಾರೆ.