ನ್ಯೂಸ್ ನಾಟೌಟ್ : ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಆಗಲಿದೆ.ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ.
ವಿದ್ಯುತ್ ದರ ಹೆಚ್ಚಾಗಿರುವ ಬಗೆಗೆ ಹಲವಾರು ದೂರುಗಳು ಕೇಳಿ ಬಂದಿರುವ ಹಿನ್ನಲೆ ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಕೂಡಲೇ ನಮ್ಮ ಮನವಿಗೆ ಸ್ಪಂದಿಸಬೇಕು.ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.ಆದರೆ ರಾಜ್ಯ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ವಿಫಲವಾಗಿರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಈ ನಿರ್ಧಾರ ಮಾಡಲಾಗಿದೆ.ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಬಂದ್ ಗೆ ಕರೆ ನೀಡಿದೆ.ಇದಕ್ಕೆ ಸಂಬಂಧ ಪಟ್ಟ ಹಾಗೆ ಈಗಾಗ್ಲೇ ಹಲವೆಡೆ ನಿರೀಕ್ಷೆಗೂ ಮೀರಿ ವಿದ್ಯುತ್ ಬಿಲ್ ಗಳು ಬರುತ್ತಿರುವುದರ ಬಗ್ಗೆ ವರದಿಯಾಗುತ್ತಿವೆ.ಇದರ ಬೆನ್ನಲ್ಲೇ ಇತ್ತೀಚೆಗಷ್ಟೇ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 7 ಲಕ್ಷ ರೂ.ಕರೆಂಟ್ ಬಿಲ್ ಬಂದಿರುವ ಬಗೆಗಿನ ವೀಡಿಯೊವೊಂದು ವ್ಯಾಪಕ ವೈರಲ್ ಕೂಡ ಆಗಿತ್ತು.