ನ್ಯೂಸ್ ನಾಟೌಟ್: ಸಿಎಂ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಫ್ರೀ ಯೋಜನೆಗಳಿಗೆ ಒಂದೊಂದಾಗಿಯೇ ಚಾಲನೆ ಸಿಗುತ್ತಿದೆ. ಅಂತಹ ಯೋಜನೆಗಳ ಪೈಕಿ ಗೃಹ ಲಕ್ಷ್ಮೀ ಯೋಜನೆ ಕೂಡ ಒಂದಾಗಿದೆ. ಈ ಕುರಿತಂತೆ ಯಾವಾಗ ಸಿಗುತ್ತೆ 2000 ರೂ. ಸಿಗುತ್ತದೆ ಎಂದು ಮಹಿಳೆಯರೆಲ್ಲ ಕಾಯುತ್ತಿರುವ ಸಂದರ್ಭದಲ್ಲಿಯೇ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಭೆ ಬಳಿಕ ಟ್ವೀಟ್ ಮಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಗೃಹಲಕ್ಷ್ಮಿ’ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ. ಈ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದೆ. ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಗುವುದು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಯಾವಾಗ ಅರ್ಜಿ ಸ್ವೀಕಾರ ಮಾಡಬೇಕೆನ್ನುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅರ್ಜಿ ಸ್ವೀಕಾರ ಮಾಡಲಿದ್ದೇವೆ. ಆಗಸ್ಟ್ ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, ಸೇವಾಸಿಂಧು ಸರ್ವರ್ ಗೆ ಓವರ್ ಲೋಡ್ ಆಗುತ್ತಿದೆ. ಅದು ಅಪ್ಡೇಟ್ ಆದ್ರೂ ಕೂಡ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆಲ್ಲಾ ಹೊಸ ಆ್ಯಪ್ ನಲ್ಲಿ ಪರಿಹಾರ ಸಿಗಲಿದ್ದು. ಸಂಪುಟ ಸಭೆಯಲ್ಲಿ ಈ ಆ್ಯಪ್ ನ್ನು ಮುಖ್ಯಮಂತ್ರಿಗಳಿಗೆ ತೋರಿಸಿ ಅಂತಿಮ ದಿನಾಂಕ ಘೋಷಣೆ ಮಾಡಲಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.