ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯಲ್ಲಿ ಮಡಿಕೇರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಎರಡು ತುಂಡಾಗಿದೆ. ಕಾರಿನೊಳಗೆ ಇದ್ದವರು ಎಲ್ಲರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಒಂದು ಕರೆಂಟ್ ಕಂಬ ಜಖಂಗೊಂಡಿದ್ದರಿಂದ 4 ಫೀಡರ್ ಗಳನ್ನು ಆಫ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದರಿಂದಾಗಿ ಮಡಿಕೇರಿ ಟೌನ್ 2, ಭಾಗಮಂಡಲ ಹಾಗೂ ಸಂಪಾಜೆ ಸುತ್ತಾ ಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ ಎನ್ನಲಾಗಿದೆ.