ನ್ಯೂಸ್ ನಾಟೌಟ್: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನದ ಚಾಲಕನೋರ್ವ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಚಾಲಕನನ್ನು ಬಾಲಕೃಷ್ಣ (58) ಎಂದು ಗುರುತಿಸಲಾಗಿದೆ. ಇವರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿ ವಾಸವಾಗಿದ್ದಾರೆ. ಈ ಹಿಂದೆ ಆರೋಗ್ಯ ಇಲಾಖೆಯ ವಾಹನದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿದ್ದರು ಎಂದು ತಿಳಿದು ಬಂದಿದೆ. ಗುರುವಾರ ತನ್ನ ಮನೆಯ ಮಹಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಾಲಕೃಷ್ಣ ಅವರ ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.