ನ್ಯೂಸ್ ನಾಟೌಟ್: ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷರರ ಕಚೇರಿಯನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು , ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ. ಅನುದಾನವೂ ಅನುಮೋದನೆಯಾಗಿರುತ್ತದೆ . ಸಸರ್ಕಾರ ಈ ವಿಚಾರವನ್ನು ಪರಿಗಣಿಸಿ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
ಪುತ್ತೂರಿಗೆ ಉಪವಿಭಾಗಕ್ಕೆ ಎಸ್ಪಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹಲವು ವರ್ಷಗಳಿಂದ ಸರ್ಕಾರದ ಮೂಲಕ ಒತ್ತಡ ತರಲಾಗುತ್ತದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇದರ ಕಾರ್ಯ ನಡೆದಿರುವುದಿಲ್ಲ. ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶ ವ್ಯಾಪ್ತಿ ಮಂಗಳೂರು ಕಮಿಷನರ್ ಸುಪರ್ದಿಗೆ ಒಳಪಡುವ ಕಾರಣ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿದೆ. ಶಾಸಕ ಅಶೋಕ್ ರೈ ಮುಂದಾಳತ್ವದಲ್ಲಿ ಈ ಬಾರಿ ಎಸ್ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದ್ದು ಈಗಾಗಲೇ ರಾಜ್ಯ ಗೃಹ ಸಚಿವ ಪರಮೇಶ್ವರ್ ಜತೆ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಬಹು ವರ್ಷದ ಕನಸು ಈ ಬಾರಿ ನನಸಾಗುವ ಸಾಧ್ಯತೆ ಇದೆ. ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಈ ವೇಳೆ ಉಪಸ್ಥಿತರಿದ್ದರು.