ನ್ಯೂಸ್ ನಾಟೌಟ್: ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮಂಗಳೂರಿನ ಪುರಭವನದಲ್ಲಿ ಸಾಮೂಹಿಕ ಸಂಭ್ರಮದ ಯೋಗಾಚರಣೆಯನ್ನು ಮಾಡಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಸೇರಿದಂತೆ ಹಲವಾರು ಮಂದಿ ಗಣ್ಯರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಆಯೋಜಿರುವ ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಡಿಎಚ್ ಒ ಡಾ.ಕಿಶೋರ್ ಕುಮಾರ್, ಆಯುಷ್ ಅಧಿಕಾರಿ ಡಾ. ಇಕ್ಬಾಲ್ ಅಹಮ್ಮದ್ ಭಾಗವಹಿಸಿದರು. ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ಮಾಡಿದರು.