ನ್ಯೂಸ್ ನಾಟೌಟ್ : ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಬೀಗ ಬೀಳುತ್ತಿದೆ.
ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅಳವುಪಾರೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಇದನ್ನು ತಕ್ಷಣ ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ. ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ಸ್ಫೋಟಕಗಳಿಂದ ಸುತ್ತಮುತ್ತ ಮನೆ, ದೇವಸ್ಥಾನ, ಶಾಲಾ ಕಟ್ಟಡಗಳಿಗೆ ತೊಂದರೆಯಾಗಿತ್ತು. ಈ ಹಿನ್ನಲೆ ಆಕ್ರೋಶಗೊಂಡ ಸ್ಥಳೀಯರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಗಣಿಗಾರಿಕೆ ನಿಲ್ಲಿಸುವಂತೆ ಮನವಿ ಮಾಡಿದ್ದಲ್ಲದೆ ಹಲವು ಬಾರಿ ಧರಣಿ ಕೂಡ ನಡೆಸಿದ್ದರು. ಇದೀಗ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದಾಗಿ ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.