ನ್ಯೂಸ್ ನಾಟೌಟ್ : ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ ಕಾರಣಕ್ಕೆ 21 ವರ್ಷದ ಯುವಕನನ್ನು ಕೊಲೆ ಮಾಡಿ ಮೃತದೇಹವನ್ನು ಏಳು ತುಂಡುಗಳಾಗಿ ಕತ್ತರಿಸಿ ಚರಂಡಿಗೆ ಬಿಸಾಡಲಾಗಿದೆ. ಈ ಭೀಕರ ಕೃತ್ಯ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ.
ಮನೋಹರ್ ಲಾಲ್ ಮೃತ ದುರ್ದೈವಿ. ಈತ ಮುಸ್ಲಿಂ ಯುವತಿಯನ್ನು ಪ್ರೀತಿಸುತ್ತಿದ್ದ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿದೆ. ಈತನನ್ನು ಮುಗಿಸಲೇಬೇಕು ಎಂದು ಯೋಚನೆ ಮಾಡಿದ ಯುವತಿಯ ಮನೆಯ ಮೂವರು ಸೇರಿಕೊಂಡು ಮನೋಹರ್ ಲಾಲ್ ಅನ್ನು ಚೆನ್ನಾಗಿ ಥಳಿಸಿದ್ದಾರೆ. ಆ ಬಳಿಕ ಕಲ್ಲಿನಿಂದ ಜಜ್ಜಿ ಮೃತದೇಹವನ್ನು ಏಳು ತುಂಡುಗಳಾಗಿ ಕತ್ತರಿಸಿದ್ದಾರೆ. ಬಳಿಕ ಚರಂಡಿಗೆ ಎಸೆದಿದ್ದಾರೆ.
ಜೂನ್ 6 ರಂದು ಕಾಣೆಯಾಗಿದ್ದ ಮನೋಹರ್ ಮೃತದೇಹದ ಭಾಗಗಳು ಜೂನ್ 9 ರಂದು ಚರಂಡಿಯಲ್ಲಿ ಲಭ್ಯವಾಗಿದೆ. ಫೋಸ್ಟ್ ಮಾರ್ಟ್ಂ ಬಳಿಕ ಭೀಕರ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿ ಸಹೋದರ ಶಬ್ಬೀರ್ ಸೇರಿದಂತೆ ಮೂರ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಈಗ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.