ನ್ಯೂಸ್ ನಾಟೌಟ್: ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ-ಕುರುಂಜಿಬಾಗ್ ನೇತೃತ್ವದಲ್ಲಿ ಸುಳ್ಯದ ಶಾಂತಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಓದುವ ದಿನದಂಗವಾಗಿ ಓದುವ ದಿನಾಚರಣೆ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ಸೋಮವಾರ ನಡೆಯಿತು.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿ ಮಕ್ಕಳಿಗೆ ಪುಸ್ತಕ ವಿತರಿಸಿದರು. ಬಳಿಕ ಮಾತನಾಡಿ, ಮಕ್ಕಳು ಪುಸ್ತಕ ಓದುವ ಹವ್ಯಾಸಗಳನ್ನು ಬೆಳೆಸಬೇಕು. ಇದರಿಂದ ಮಕ್ಕಳಲ್ಲಿ ಜ್ಞಾನ ವೃದ್ಧಿಯಾಗಿ ತಮ್ಮ ಮುಂದಿನ ವಿದ್ಯಾಭ್ಯಾಸಗಳಿಗೆ ಸಹಕಾರಿಯಾಗುತ್ತದೆ. ಶಾಲೆಯಲ್ಲಿರುವ ಗ್ರಂಥಾಲಯಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಲು ಶಿಕ್ಷಕರು ನೆರವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಕೆವಿ.ಜಿ. ಆಸ್ಪತ್ರೆಯ ಡಾ. ನವ್ಯಾ, ಡಾ. ದಿನೇಶ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.