ನ್ಯೂಸ್ ನಾಟೌಟ್ : ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 288ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದು, 900ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ನಡೆದಿದೆ, ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಉಚಿತ ಶಾಲಾ ಶಿಕ್ಷಣ ನೀಡುವುದಾಗಿ ಅದಾನಿ ಸಮೂಹ ತಿಳಿಸಿದ್ದ ಬಗ್ಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿವೆ.
ಶಕ್ತಿ, ಸರಕುಗಳು, ವಿಮಾನ ನಿಲ್ದಾಣಗಳು ಮತ್ತು ಡೇಟಾ ಸೆಂಟರ್ಗಳಿಗೆ ಬಂದರುಗಳ ವ್ಯವಹಾರವನ್ನು ಹೊಂದಿರುವ ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಗೌತಮ್ ಅದಾನಿ ಟ್ವೀಟ್ ಮಾಡಿದ್ದು, ಸಂತ್ರಸ್ತರನ್ನು ಮತ್ತು ಅವರ ಕುಟುಂಬಗಳನ್ನು ಬೆಂಬಲಿಸುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಯನ್ನು ನೀಡುವುದು ಎಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
“ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರವಾಗಿ ವಿಚಲಿತರಾಗಿದ್ದೇವೆ. ಈ ಅಪಘಾತದಲ್ಲಿ ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣವನ್ನು ಅದಾನಿ ಗ್ರೂಪ್ ನೋಡಿಕೊಳ್ಳಲು ನಿರ್ಧರಿಸಿದೆ. ಸಂತ್ರಸ್ತರು ಮತ್ತು ಅವರ ಕುಟುಂಬಗಳು ಮತ್ತು ಮಕ್ಕಳಿಗೆ ಉತ್ತಮ ನಾಳೆಯನ್ನು ನೀಡಿ, ಅವರಿಗೆ ಬೆಂಬಲ ನೀಡುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ.” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈ ಟ್ವೀಟ್ ಬಗ್ಗೆ ಬಿಜೆಪಿ ಕಡೆಗೆ ಅದಾನಿಯ ಒಲವು ಇದೆ ಎಂದು ಆರೋಪಿಸುತ್ತಿದ್ದ ಪ್ರತಿಪಕ್ಷಗಳ ವಿರುದ್ಧ ಬಿಜೆಪಿಯು ಅದಾನಿ ಮಾಡುತ್ತಿರುವ ಇಂತಹ ಒಳ್ಳೆಯ ಕೆಲಸಗಳನ್ನಿಟ್ಟುಕೊಂಡು ಸಮರ್ಥಿಸಿಕೊಳ್ಳುತ್ತಿದೆ.