ನ್ಯೂಸ್ ನಾಟೌಟ್: ಪ್ಯಾನ್ ಕಾರ್ಡ್ (PAN Card) ಅನ್ನು ಆಧಾರ್ ಕಾರ್ಡ್ (Adhar Card) ನೊಂದಿಗೆ ಲಿಂಕ್ ಮಾಡೋಕೆ ಜೂನ್ 30 ಅಂದರೆ ನಾಳೆ ಕೊನೆಯ ದಿನವಾಗಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಕಳೆದ ಮೂರು ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆಯು ಹಲವು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಿತ್ತು. ಬಳಿಕ 2023ರ ಜೂನ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿತ್ತು. ಇದೀಗ ಪ್ಯಾನ್- ಆಧಾರ್ ಕಾರ್ಡ್ ಲಿಂಕ್ (PAN Card-Adhar Card Link) ಮಾಡಿಸಿಕೊಳ್ಳಲು ನಾಳೆ ಕೊನೆಯ ದಿನವಾಗಿದೆ.
ಲಿಂಕ್ ಮಾಡುವುದು ಏಕೆ.?: ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿರುವುದನ್ನು ತಪ್ಪಿಸುವ ಉದ್ದೇಶದಿಂದ ಆಧಾರ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಪ್ಯಾನ್ ಜೊತೆಗೆ ಆಧಾರ್ ಜೋಡಿಸುವ ವ್ಯವಸ್ಥೆಯನ್ನು 2017ರ ಏಪ್ರಿಲ್ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಆಗ ಪ್ಯಾನ್-ಆಧಾರ್ ಜೋಡಣೆಗೆ ಸರ್ಕಾರ ಯಾವುದೇ ಶುಲ್ಕ ವಿಧಿಸಿರಲಿಲ್ಲ. ಆದರೆ ನಿರೀಕ್ಷಿತ ಮಟ್ಟದಲ್ಲಿ ಆಧಾರ್- ಪ್ಯಾನ್ ಲಿಂಕ್ ಕಾರ್ಯಗತವಾಗಲಿಲ್ಲ. ಹೀಗಾಗಿ ಲಿಂಕ್ಗೆ ಹಲವು ಬಾರಿ ದಿನಾಂಕ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
ಒಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೆ ಆಧಾರ್ ಪ್ಯಾನ್ ಕಾರ್ಡ್ ಲಿಂಕ್ಗೆ ಮತ್ತೆ ಅವಧಿ ವಿಸ್ತರಣೆ ಮಾಡುವ ಸಾಧ್ಯತೆಗಳಿಲ್ಲ ಎನ್ನಲಾಗುತ್ತಿದ್ದು, ಇತ್ತೀಚೆಗೆ ಘೋಷಣೆಯಾದ ರಾಜ್ಯ ಸರ್ಕಾರದ ಫ್ರೀ ಯೋಜನೆಗಳಿಗೂ ಈ ಆಧಾರ್ – ಪಾನ್ ಲಿಂಕ್ ಮಾಡಿಸಿದ್ದರೆ ಆ ಯೋಜನೆಗಳ ಜಾರಿಯಲ್ಲಿ ಆಗಬಹುದಾದ ಅವ್ಯವಹಾರಗಳನ್ನು ತಡೆಯಲೂ ಕೂಡ ಸಹಕಾರಿಯಾಗಲಿದೆ. ಒಟ್ಟಿನಲ್ಲಿ ಎಲ್ಲಾ ದಾಖಲೆಗಳು ಸಮರ್ಪಕವಾಗಿದ್ದರೆ ಯಾವುದೇ ಯೋಜನೆಗಳ ಸದುಪಯೋಗ ಪಡೆಇಸಿಕೊಳ್ಳಲು ಉಪಕಾರಿಯಾಗುವುದಂತೂ ನಿಜ. ಸದ್ಯ ರಾಜ್ಯ ಸರ್ಕಾರ ತನ್ನ ಯೋಜನೆಗಳ ಜಾರಿಯ ನಿಯಮದಲ್ಲಿ ಈ ಆಧಾರ್- ಫ್ಯಾನ್ ಲಿಂಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿಲ್ಲ, ಮುಂದೆ ಅದು ಜಾರಿಯಾದರೂ ಅಚ್ಚರಿಯಿಲ್ಲ.