ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯು ಸಿದ್ದು ಸರಕಾರ ಬಂದಿರುವ ಬೆನ್ನಲ್ಲೇ ಹಿಂದಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸ್ವತಃ ಈ ಬಗ್ಗೆ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ‘ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂದಕ್ಕೆ ತೆಗೆದುಕೊಳ್ಳಬೇಕೋ ಅಥವಾ ಬೇಡವಾ? ಅನ್ನುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಎಮ್ಮೆ , ಕೋಣೆಗಳನ್ನು ಕಡಿಯುವುದಾದ್ರೆ ಹಸುಗಳನ್ನು ಏಕೆ ಕಡಿಯಬಾರದು? ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೆಗೆದು ಮುಚ್ಚಲು ಬಹಳ ಕಷ್ಟವಾಯಿತು. ೨೫ ಮಂದಿ ಬಂದ್ರೂ ಹಸುವನ್ನು ಎತ್ತಲೂ ಆಗಿರಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮಣ್ಣು ಮಾಡಬೇಕಾಯಿತು. ಎಲ್ಲವನ್ನೂ ಗಮನಿಸಿಕೊಂಡು ಸರಕಾರ ಕ್ರಮ ತೆಗೆದುಕೊಳ್ಳುತ್ತದೆ’ ಎಂದು ಸಚಿವ ವೆಂಕಟೇಶ್ ತಿಳಿಸಿದರು. ೨೦೨೧ರಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದನ್ನು ಸ್ಮರಿಸಬಹುದು.