ನ್ಯೂಸ್ ನಾಟೌಟ್: ಸುಳ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶ್ವಾಸಕೋಶ ವಿಭಾಗ ವತಿಯಿಂದ ಗುರುವಾರ (ಜೂನ್ 22) ಅಸ್ತಮಾ ಅಲೆರ್ಜಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ತಪಾಸಣೆ ಶಿಬಿರದಲ್ಲಿ ಅಸ್ತಮಾದ ಗುಣಲಕ್ಷಣಗಳಾದ ಉಸಿರಾಟದ ತೊಂದರೆ, ಎದೆ ಬಿಗಿಯಾದಂತೆ ಅನ್ನಿಸುವುದು, ಉಸಿರಾಡುವಾಗ ಸೀಟಿ ಹೊಡೆದಂತಾಗುವುದಾಗಿದೆ. ಈ ಉಚಿತ ಆರೋಗ್ಯ ತಪಾಸಣೆ ಮತ್ತು ಸಮಾಲೋಚನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 08257-235532 ,7353752223, 8310234680 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ.