ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಯುವತಿಯೊಬ್ಬಳು ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತಳನ್ನು ಮಂಡೆಕೋಲು ಗ್ರಾಮದ ದೇವಪ್ಪ ನಾಯ್ಕರ ಪುತ್ರಿ ಯಶ್ವಿನಿ (23) ಎಂದು ಗುರುತಿಸಲಾಗಿದೆ. ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಈ ಕೃತ್ಯ ಎಸಗಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ನೇಣು ಹಾಕಿಕೊಳ್ಳುವ ಸಂದರ್ಭದಲ್ಲಿ ತಾಯಿ ಹುಲ್ಲು ತರಲು ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ. ಸದ್ಯ ಸುಳ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.